ಮಡಿಕೇರಿ, ಫೆ. 9: ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2018-19ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ 8ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳಿಗೆ 5 ದಿನಗಳ ಕಾಲ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ತರಬೇತಿ ಶಿಬಿರ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಅಧ್ಯಕ್ಷರು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಇವರು ಭಾಗವಹಿಸಿದ್ದರು. ಈ ಸಂದರ್ಭ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಟ್ರ್ಯಾಕ್‍ಸೂಟ್, ಕ್ರೀಡಾ ಸಾಮಗ್ರಿಗಳು, ಲೇಖನ ಸಾಮಗ್ರಿಗಳು ಹಾಗೂ ಸ್ವಚ್ಛತಾ ಸಾಮಗ್ರಿಗಳು, ಪ್ರಯಾಣ ಭತ್ಯೆಯನ್ನು ನೀಡಲಾಯಿತು.