ಸೋಮವಾರಪೇಟೆ, ಫೆ. 10: ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಯಡವನಾಡು ಸರ್ಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಗೊಂಬೆ ದಳದ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರದ ಕುಮಾರಿ ಸೇರಿದಂತೆ ಕಾರ್ಯಕರ್ತರು, ಶಾಲಾ ಶಿಕ್ಷಕರುಗಳು ಭಾಗವಹಿಸಿದ್ದರು.