ಮಡಿಕೇರಿ, ಫೆ. 11: ನರಿಯಂದಡ ಕೇಂದ್ರ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರ, ಸಾರ್ವಜನಿಕರ ಶಿಕ್ಷಣ ಇಲಾಖೆಯಿಂದ ನೀಡಿದ ಉಚಿತ ಬೈಸಿಕಲ್‍ಗಳನ್ನು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಸ್. ಸುಮಂತ್ ಅವರ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯೆ ಉಮಾಪ್ರಭು, ನರಿಯಂದಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಶಿವಪ್ಪ, ಉಪಾಧ್ಯಕ್ಷ ಬೆಳಿಯಂಡ್ರ ರತೀಶ್‍ಕುಮಾರ್ (ಶರಣು) ಇವರುಗಳು ಅತಿಥಿಗಳಾಗಿ ಆಗಮಿಸಿದ್ದರು. ಆಡಳಿತ ಮಂಡಳಿಯ ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ನಿರ್ದೇಶಕರು ಗಳು ಹಾಜರಿದ್ದರು.