ಕುಶಾಲನಗರ, ಫೆ. 10: ಕುಶಾಲನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತೆರೆ ಮಹೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೈಚನಹಳ್ಳಿಯ ಯೋಗಾನಂದ ಬಡಾವಣೆಯಲ್ಲಿರುವ ದೇವಾಲಯದಲ್ಲಿ ಶ್ರೀ ಮುತ್ತಪ್ಪ ಸೇವಾ ಟ್ರಸ್ಟ್ ಆಶ್ರಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಿತು.

ಶನಿವಾರ ಬೆಳಿಗ್ಗೆ ಗಣಪತಿ ಹೋಮ, ಧ್ವಜಾರೋಹಣ, ಮಧ್ಯಾಹ್ನ ಮುತ್ತಪ್ಪನ ಮಲೈ ಇರುಕ್ಕಲ್, ಮುತ್ತಪ್ಪನ್ ವೆಳ್ಳಾಟಂ ನಂತರ ತಾಲಪೊಲಿ ಮೆರವಣಿಗೆ, ರಾತ್ರಿ ಸಿಡಿಮದ್ದು ಪ್ರದರ್ಶನ, ಅನ್ನದಾನ, ಸಾಂಸ್ಕøತಿಕ ಕಾರ್ಯಕ್ರಮ ಬಳಿ ಕಳಿಗ ಪಾಟು ನಡೆಯಿತು.

ಧ್ವಜಾರೋಹನ ಕಾರ್ಯಕ್ರಮದಲ್ಲಿ ಕುಶಾಲನಗರ ದೇವಾಲಯ ಒಕ್ಕೂಟದ ಪ್ರತಿನಿಧಿಗಳು ಪಾಲ್ಗೊಂಡು ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮುತ್ತಪ್ಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ವರದ, ಪ್ರಧಾನ ಕಾರ್ಯದರ್ಶಿ ಕೆ.ಕೆ. ದಿನೇಶ್‍ಕುಮಾರ್, ಉತ್ಸವ ಸಮಿತಿ ಅಧ್ಯಕ್ಷ ಕೆ.ಜಿ. ಸುಧಿಕುಮಾರ್, ದೇವಾಲಯ ಒಕ್ಕೂಟದ ಅಧ್ಯಕ್ಷ ಎಂ.ಕೆ. ದಿನೇಶ್, ಗೌರವಾಧ್ಯಕ್ಷ ಕೆ.ಆರ್. ಶಿವಾನಂದನ್ ಮತ್ತು ವಿವಿಧ ದೇವಾಲಯಗಳ ಪ್ರತಿನಿಧಿಗಳು ಇದ್ದರು.