ಸೋಮವಾರಪೇಟೆ,ಫೆ.10: ಇಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ತಾ. 12ರಂದು (ನಾಳೆ) ರಥಸಪ್ತಮಿ ಅಂಗವಾಗಿ ಸಮೀಪದ ದೊಡ್ಡಮಳ್ತೆ ಗ್ರಾಮ ಹೊನ್ನಮ್ಮನ ಕೆರೆ ದಡದಲ್ಲಿ 108 ಸೂರ್ಯ ನಮಸ್ಕಾರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಶಿಕ್ಷಕಿ ರಾಗಿಣಿ ತಿಳಿಸಿದ್ದಾರೆ.

ತಾ. 12ರಂದು ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಸೂರ್ಯ ನಮಸ್ಕಾರ ನಡೆಯಲಿದ್ದು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆರ್ಟ್ ಆಫ್ ಲಿವಿಂಗ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.