ವೀರಾಜಪೇಟೆ, ಫೆ: 11 ವೀರಾಜಪೇಟೆ ತಾಲೂಕು ಸಾರ್ವಜನಿಕ ಹಿತ ರಕ್ಷಣಾ ಸಮಿತಿಯ ವಾರ್ಷಿಕ ಮಹಾಸಭೆಯು ತಾ. 20ರಂದು ಬೆಳಿಗ್ಗೆ 10ಗಂಟೆಗೆ ವೀರಾಜಪೇಟೆಯ ಸೌತ್ ಕೂರ್ಗ್‍ಕ್ಲಬ್‍ನ ಮೇಲಂತಸ್ತಿನಲ್ಲಿರುವ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ. ಎಸ್. ಬೋಪಯ್ಯ ತಿಳಿಸಿದ್ದಾರೆ. ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಕೆ.ಎಂ.ಕುಶಾಲಪ್ಪ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಜಿ. ಬೋಪಯ್ಯ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.