ಸೋಮವಾರಪೇಟೆ,ಫೆ.10: ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಮಾರ್ಷಿಯಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆಯ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಮತ್ತು ಯೋಗ ಚಾಂಪಿಯನ್‍ಶಿಪ್‍ನಲ್ಲಿ ಇಲ್ಲಿನ ಜ್ಞಾನವಿಕಾಸ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದಿದ್ದಾರೆ. ಮೈಸೂರಿನ ಶಿಕ್ಷಕರ ಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಆಕಾಶ್, ಅನುಶ್ರೀ, ಸೋನು, ಸಂಜನ, ಸೌಜನ್ಯ, ಶಶಾಂಕ್, ಯಶ್ವಂತ್, ಸಿಂಚನ, ಸುಪ್ರಿತ, ಯಶಸ್ವಿನಿ, ಸೃಜನ ಅವರುಗಳು ಪ್ರಶಸ್ತಿ ಪಡೆದಿದ್ದಾರೆ.