ಕೂಡಿಗೆ, ಫೆ. 10: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಸಮೀಪದಲ್ಲಿರುವ ಗಂಧದ ಹಾಡಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಇದೀಗ ಮಾಡಲಾಗಿದೆ.

ಕಳೆದ 20 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೀಗ ತಾಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ವತಿಯಿಂದ ರೂ. 5 ಲಕ್ಷಗಳಿಂದ ಪೈಪ್‍ಲೈನ್ ಹಾಗೂ ನೀರಿನ ಟ್ಯಾಂಕ್‍ಗಳನ್ನು ನಿರ್ಮಾಣ ಮಾಡಲಾಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ಈ ವ್ಯವಸ್ಥೆ ಸಂಬಂಧಪಟ್ಟ ಇಲಾಖೆಯು ಸ್ಪಂದಿಸುವ ಮೂಲಕ ಹಾಡಿಯ 25 ಕುಟುಂಬಗಳಿಗೆ ಅನುಕೂಲವಾಗಿದೆ.