ಮಡಿಕೇರಿ, ಫೆ. 10: ಕ್ರೆಸೆಂಟ್ ಶಾಲೆ ವತಿಯಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡುವ ಕಾರ್ಯಾಗಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭ ಕ್ರೆಸೆಂಟ್ ಶಾಲೆಯ ಗೌರವ ಕಾರ್ಯದರ್ಶಿ ಜಿ.ಹೆಚ್. ಮಹಮ್ಮದ್ ಹನೀಫ್ ಮಾತನಾಡಿದರು.
ಸಿಗ್ಮಾ ಸಂಸ್ಥೆಯ ಸಿಇಓ ಅಮೀನ್ ಎ. ಮುದಸ್ಸರ್ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಸಂತ ಮೈಕಲರ, ಸಂತ ಜೋಸೆಫ್, ನೇತಾಜಿ ಶಾಲೆ, ಕ್ರೆಸೆಂಟ್ ಶಾಲೆ ವಿದ್ಯಾರ್ಥಿಗಳು ಹಾಗೂ ಮಡಿಕೇರಿಯ ವಿವಿಧ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಮಾರ್ಗದರ್ಶನ ಪಡೆದುಕೊಂಡರು.
ಈ ಸಂದರ್ಭ ಕ್ರೆಸೆಂಟ್ ಶಾಲಾ ಆಡಳಿತ ಮಂಡಳಿ, ಬೋಧಕ ವರ್ಗದವರು ಹಾಜರಿದ್ದರು.