ನಾಪೆÇೀಕ್ಲು, ಫೆ. 11: ಬಲ್ಲಮಾವಟಿಯಿಂದ ಪೇರೂರು ಗ್ರಾಮಕ್ಕಾಗಿ ನೆಲಜಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಹಾಗೂ ಪೇರೂರು ಗ್ರಾಮದಿಂದ ನೆಲಜಿ ಗ್ರಾಮಕ್ಕಾಗಿ ಕಕ್ಕಬ್ಬೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಅಪ್ಪುಮಣಿಯಂಡ- ಕೈಬುಲಿರ ರಸ್ತೆಯು ತೀರಾ ಹದಗೆಟ್ಟಿದ್ದು, ಜನತೆ ನಡೆದಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಕೂಡಲೇ ದುರಸ್ತಿಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವದು ಎಂದು ಗ್ರಾಮಸ್ಥರಾದ ಅಪ್ಪುಮಣಿಯಂಡ ಸನ್ನು ಸೋಮಣ್ಣ ಮತ್ತು ಪಾಲೆಯಡ ಸಬಿತ ಚಿಣ್ಣಪ್ಪ ಎಚ್ಚರಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ 10 ವರ್ಷಗಳಿಂದ ಈ ರಸ್ತೆಯು ತೀರಾ ಹದಗೆಟ್ಟಿದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಯಾವದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಈ ರಸ್ತೆಯು ಗುಂಡಿಗಳಿಂದ ತುಂಬಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಇಲ್ಲಿ ನಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸಂಚಾರವಂತೂ ಕಷ್ಟಕರವಾಗಿದೆ. ಆದ್ದರಿಂದ ಜಿಲ್ಲಾ ಪಂಚಾಯಿತಿ ಮತ್ತು ಸಂಬಂದಿಸಿದ ಅಧಿಕಾರಿಗಳು ಕೂಡಲೇ ಈ ಎರಡು ರಸ್ತೆಗಳನ್ನು ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿದ ಅವರು ಇಲ್ಲವಾದರೆ ಪ್ರತಿಭಟನೆ ನಡೆಸಬೇಕಾದಿತು ಎಂದು ಎಚ್ಚರಿಸಿದ್ದಾರೆ.
ಗೋಷ್ಠಿಯಲ್ಲಿ ಅಪ್ಪಚೆಟ್ಟೋಳಂಡ ಶ್ಯಾಮ್ ಕಾಳಯ್ಯ, ಅಪ್ಪುಮಣಿಯಂಡ ಕಾರ್ಯಪ್ಪ ಇದ್ದರು.