ಗೋಣಿಕೊಪ್ಪ ವರದಿ, ಫೆ. 10: ಸ್ಥಳೀಯ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸ್ಥಳೀಯ ಪ್ರೌಢಶಾಲಾ ವಿದ್ಯಾರ್ಥಿಗಳ ಸಹಯೋಗದಲ್ಲಿ ಪಟ್ಟಣದಲ್ಲಿ ಜಾಥಾ ನಡೆಯಿತು.

ಉಮಾಮಹೇಶ್ವರಿ ದೇವಸ್ಥಾನ ಆವರಣದಿಂದ ಪೊನ್ನಂಪೇಟೆ ರಸ್ತೆ ಜಂಕ್ಷನ್‍ವರೆಗೆ ಜಾಥಾ ತೆರಳಿ ಜಾಗೃತಿ ಮೂಡಿಸಲಾಯಿತು. ಶಾಲೆಯ ಆವರಣದಲ್ಲಿ ಪೊಲೀಸ್ ಉಪನಿರೀಕ್ಷಕ ಶ್ರೀಧರ್ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಮುಖ್ಯ ಶಿಕ್ಷಕಿ ಶಾಂತಿ ಉಪಸ್ಥಿತರಿದ್ದರು.