ಮಡಿಕೇರಿ, ಫೆ. 10: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಜ್ಞಾನವನ್ನೂ ಸಂಪಾದಿಸಿ ಕೊಳ್ಳಬೇಕೆಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದ ಪೋಷಕರು ಹಾಗೂ ಶಿಕ್ಷಕರ ಸಂಘದ ವತಿಯಿಂದ ನವೋದಯ ವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಕವಿಗೋಷ್ಠಿ, ಪುಸ್ತಕ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಪುಸ್ತಕ, ವಸ್ತುಗಳನ್ನು ಯಾರೂ ಬೇಕಾದರೂ ಕೊಡಬಹುದು. ಆದರೆ ಜ್ಞಾನವನ್ನು ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಅದನ್ನು ನಾವುಗಳೇ ಸಂಪಾದಿಸಿ ಕೊಳ್ಳಬೇಕು ಎಂದರು.

ಕ.ಸಾ.ಪ. ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ, ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತರುವಂತಾಗಬೇಕೆಂದು ತಿಳಿಹೇಳಿದರು.

ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ದೊಂದಿಗೆ ಪಠ್ಯೇತರ ಚಟುವಟಿಕೆ ಗಳಲ್ಲೂ ತೊಡಗಿಸಿಕೊಂಡು ಪ್ರತಿಭೆ ಹೊರಹಾಕಬೇಕು. ನವೋದಯ ದಂತಹ ಶಾಲೆಯಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿರುವ ಕಾರ್ಯವನ್ನು ಶ್ಲಾಘಿಸಿದರು.

ವೀರಾಜಪೇಟೆ ತಾಲೂಕು ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ಸಾಧನೆ ಮಾಡಬೇಕೆಂದ ರಲ್ಲದೆ, ಪೋಷಕರು ವಿದ್ಯಾಲಯದ ಅಭಿವೃದ್ಧಿಗೆ ಕೈಜೋಡಿಸುವಂತೆ ಕೋರಿದರು. ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಪ್ರಾಂಶುಪಾಲ ಪಿ.ಎಂ. ಐಸಾಕ್ ವಿದ್ಯಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಕ.ಸಾ.ಪ.ಕ್ಕೆ ಕೃತಜ್ಞತೆ ಸಲ್ಲಿಸಿದರಲ್ಲದೆ ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಸಹಕಾರ ನೀಡುವದಾಗಿ ಹೇಳಿದರು.

ಇದೇ ಸಂದರ್ಭ ವಿದ್ಯಾರ್ಥಿಗಳು ಕವನ ವಾಚಿಸಿ ಗಮನ ಸೆಳೆದರು. ಶೈಕ್ಷಣಿಕ, ಸಾಹಿತ್ಯ, ಕ್ರೀಡೆ ಸ್ವಚ್ಛಭಾರತ್ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸ ಲಾಯಿತು. ಬಳಿಕ ವಿದ್ಯಾರ್ಥಿನಿಯ ರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ವಿದ್ಯಾಲಯದ ಉಪಪ್ರಾಂಶುಪಾಲ ದಿನೇಶ್ ಪೋಷಕ ಸಂಘದ ಸದಸ್ಯ ಪಿ.ಜಿ. ಸುಕುಮಾರ್, ಆನಂದ, ರೂಪ ಇನ್ನಿತರರಿದ್ದರು. ಶಿಕ್ಷಕ ಗಣೇಶ್ ಹೆಗಡೆ ಕಾರ್ಯಕ್ರಮ ನಿರೂಪಿಸಿದರೆ, ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ನಾಡಗೀತೆ ಹಾಡಿದರು. ಶಿಕ್ಷಕ ವಿ.ಕೆ. ನಾಯಕ್ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕ ವಿಜಯೇಂದ್ರ ವಂದಿಸಿದರು.