ಮಡಿಕೇರಿ, ಫೆ. 10: ಇಲ್ಲಿನ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ತಾ. 12ರಂದು ರಥಸಪ್ತಮಿ ಪ್ರಯುಕ್ತ ವಿಶೇಷಪೂಜೆ ಏರ್ಪಡಿಸಲಾಗಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ಜರುಗಲಿದೆ ಎಂದು ದೇವಾಲಯ ಸಮಿತಿಯ ಪ್ರಕಟಣೆ ತಿಳಿಸಿದೆ.