ಮಡಿಕೇರಿ, ಫೆ. 12: ರಥಸಪ್ತಮಿ ಪ್ರಯುಕ್ತ ಇಲ್ಲಿನ ಮಹದೇವಪೇಟೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಸತ್ಯೇಶ್ ಭಟ್, ಸಂಗಡಿಗರು ಪೂಜೆ ನೆರವೇರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.