ಮಡಿಕೇರಿ, ಫೆ. 14: ಕೊಡಗು ಪ್ರೆಸ್ ಕ್ಲಬ್ 20ನೇ ವಾರ್ಷಿಕೋತ್ಸವ ಪ್ರಯುಕ್ತ ತಾ. 15 ರಂದು (ಇಂದು) ಪತ್ರಿಕಾ ಭವನದಲ್ಲಿ ಜಿಲ್ಲೆಯ ಪತ್ರಕರ್ತರಿಗೆ ಒಳಾಂಗಣ ಆಟೋಟ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್.ಸುಬ್ರಮಣಿ ತಿಳಿಸಿದ್ದಾರೆ.
ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ರಾಜ್ಯ ಉಪಾಧ್ಯಕ್ಷ ಡಾ.ಪಿ.ಸಿ. ಹಸೈನಾರ್ ಹಾಜಿ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯ ಎಸ್.ಎ. ಮುರಳೀಧರ್, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಉಪಾಧ್ಯಕ್ಷ ಪಳೆಯಂಡ ಪಾರ್ಥ ಚಿಣ್ಣಪ್ಪ ಪಾಲ್ಗೊಳ್ಳಲಿದ್ದಾರೆ.
ಪತ್ರಕರ್ತರಿಗೆ ಚೆಸ್, ಟೇಬಲ್ ಟೆನ್ನಿಸ್, ಕೇರಂ, ಮೈಂಡ್ ಗೇಮ್ ನಡೆಯಲಿದೆ. ಪ್ರಥಮ ಬಾರಿಗೆ ಮಹಿಳಾ ಪತ್ರಕರ್ತರಿಗೆ ಒಳಾಂಗಣ ಆಟೋಟ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಛಾಯಾಚಿತ್ರ ಸ್ಪರ್ಧೆ
ಜಿಲ್ಲೆಯ ಪತ್ರಕರ್ತರಿಗೆ ಹಮ್ಮಿಕೊಂಡಿರುವ ಛಾಯಾಚಿತ್ರ ಸ್ಪರ್ಧೆ ತೀರ್ಪುಗಾರಿಕೆ ಪತ್ರಿಕಾ ಭವನದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಉದ್ಘಾಟಿಸಲಿದ್ದಾರೆ.