ಕುಶಾಲನಗರ, ಫೆ. 14: ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್‍ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಮೀಪದ ಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕೊಪ್ಪ ಕ್ಷೇತ್ರ ಜಿ.ಪಂ. ಸದಸ್ಯ ಪಿ. ರಾಜೇಂದ್ರ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಯುವ ಸಮೂಹ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಚಿಂತನೆ ಹರಿಸಬೇಕಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕಿದೆ ಎಂದರು.
ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ಮಾತನಾಡಿ, ಶಿಬಿರದಲ್ಲಿ ಸಮಯ ವ್ಯರ್ಥ ಮಾಡದೆ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು.
ಕಾಲೇಜು ಪ್ರಾಂಶುಪಾಲ ಹೆಚ್.ಕೆ. ಕೆಂಪೇಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಶಾಹಿನಾಭಾನು, ಉಪಾಧ್ಯಕ್ಷ ಯಶವಂತ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರಜನಿಮೇರಿ, ಉಪನ್ಯಾಸಕ ರೂಪ ಕುಮಾರ್, ಶಾಲಾ ಮುಖ್ಯೋಪಾ ಧ್ಯಾಯ ಎಂ.ಸಿ. ವೆಂಕಟೇಶ್, ಗ್ರಾಪಂ ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ ಅಸ್ಮತ್, ಮಂಜುನಾಥ್ ಇದ್ದರು.