ಸೋಮವಾರಪೇಟೆ, ಫೆ.15: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರ್ಕಾರಿ ನೌಕರರ ಸಂಘದ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಸಾಂಸ್ಕøತಿಕ ಕೂಟದಲ್ಲಿ ಭಾಗವಹಿಸಿದ್ದ ಸೋಮವಾರಪೇಟೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಅವರು ಹ್ಯಾಟ್ರಿಕ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಾಂಸ್ಕøತಿಕ ಕೂಟದ ಒಡಿಸ್ಸಿ, ಕೂಚಿಪುಡಿ, ಶಾಸ್ತ್ರೀಯ ನೃತ್ಯ ಪ್ರಾಕಾರಗಳಲ್ಲಿ ಪ್ರಥಮ ಸ್ಥಾನಗಳಿಸಿರುವ ಮಿಲನಾ ಭರತ್ ಅವರು, ಕಳೆದ 3 ವರ್ಷಗಳಿಂದ ಈ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ಹ್ಯಾಟ್ರಿಕ್ ಪ್ರಶÀಸ್ತಿಯ ಸಾಧನೆ ಮಾಡಿದ್ದಾರೆ.