ಕೂಡಿಗೆ, ಫೆ. 16: ಬೈಕ್ ಮತ್ತು ಪಿಕ್‍ಅಪ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನ ಕಾಲು ಮುರಿದ ಘಟನೆ ಸಮೀಪದ ಕೂಡ್ಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.

ಕೂಡಿಗೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಬೈಕ್ (ಕೆಎ.12.ಇಕೆ.5588) ಮತ್ತು ಕೂಡಿಗೆ ಕಡೆ ತೆರಳುತ್ತಿದ್ದ ಪಿಕ್‍ಅಪ್ (ಕೆಎ.12.ಬಿ.2717) ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಚಿಕ್ಕಅಳುವಾರ ಗ್ರಾಮದ ಮುರಳಿ ಎಂಬವರ ಬಲಗಾಲು ಮುರಿದು ತಲೆಗೆ ತೀವ್ರ ಪೆಟ್ಟಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಬಳಿಕೆ ಹೆಚ್ಚಿನ ಚಿಕಿತ್ಸೆಗೆ ಗಾಯಾಳುವನ್ನು ಮೈಸೂರಿಗೆ ರವಾನಿಸಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.