ಮಡಿಕೇರಿ, ಫೆ. 16: ನಗರದ ಪ್ರಥಮ ದರ್ಜೆ ಕಾಲೇಜು ಹಾಗೂ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಒಂದು ದಿನ ರಾಷ್ಟ್ರೀಯ ವಿಚಾರ ಸಂಕಿರಣವು ತಾ. 19 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಮಲ್ಲೇಶಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಡಾ. ಸಿದ್ದಲಿಂಗಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಗಣನಾಥ ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.