ಮಡಿಕೇರಿ, ಫೆ. 16: ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸುಭದ್ರವಾಗಿ ಸಂಘಟಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡುವದಾಗಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಹೇಳಿದರು.
ಇಂದು ನಗರಕ್ಕೆ ಭೇಟಿ ನೀಡಿದ್ದ ಅವರನ್ನು ಜಿ.ಟಿ. ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‍ನಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಅಭಿನಂದನೆ ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ವೀಕ್ಷಕ ವೆಂಕಪ್ಪ ಗೌಡ ಅವರಿಂದ ಕಾಂಗ್ರೆಸ್ ಬಾವುಟ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಮಂಜುನಾಥ್ ಕುಮಾರ್ ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಶ್ರಮಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಮುಖಂಡರಾದ ಟಿ.ಪಿ. ರಮೇಶ್, ಅರುಣ್ ಮಾಚಯ್ಯ, ಚಂದ್ರಕಲಾ, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯಾಕೂಬ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರಾದ ಪ್ರಕಾಶ್ ಆಚಾರ್ಯ, ಚುಮ್ಮಿ ದೇವಯ್ಯ, ಉದಯಕುಮಾರ್, ವೆಂಕಟೇಶ್ ಮತ್ತಿತರರಿದ್ದರು.