ಮಡಿಕೇರಿ, ಫೆ.16 : ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜ್‍ನÀ ಉಪನ್ಯಾಸಕರಾದ ಫಿಲಿಪ್ ವಾಸ್ ಆಯ್ಕೆಯಾಗಿದ್ದಾರೆ.
ಕಾರ್ಯಾಧ್ಯಕ್ಷರಾಗಿ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜ್‍ನ ಟಿ. ಹೇಮಂತ್‍ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶಿರಂಗಾಲ ಪದವಿ ಪೂರ್ವ ಕಾಲೇಜ್‍ನ ಹೆಚ್.ಜೆ. ನಾಗರಾಜ್ ಹಾಗೂ ತಿತಿಮತಿ ಪದವಿ ಪೂರ್ವ ಕಾಲೇಜ್‍ನ ಹೆಚ್.ಆರ್. ಸರ್ವೋತ್ತಮ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿ ಸಿ.ಎನ್. ವಿಶ್ವನಾಥ್ ಅವರ ನೇತೃತ್ವದಲ್ಲಿ ಮಡಿಕೇರಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.