ಕೂಡಿಗೆ, ಫೆ. 17: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರು ತಮ್ಮ ತಮ್ಮ ವಾರ್ಡ್‍ನ ವಿಷಯಗಳನ್ನು ಸಭೆÀಗೆ ಮಂಡಿಸಿದರು. ಸಭೆಯಲ್ಲಿ ಮುಖ್ಯವಾಗಿ ಕುಡಿಯುವ ನೀರಿನ ವ್ಯವಸ್ಥೆಗಳನ್ನು ನಿರ್ವಹಣೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಈ ಸಂದÀರ್ಭ ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ, ಸಭೆಯಲ್ಲಿ ಸದಸ್ಯರುಗಳ ಅಭಿಪ್ರಾಯಗಳನ್ನು ಆಲಿಸಲಾಗಿದೆ. 14ನೇ ಹಣಕಾಸಿನ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವದು ಎಂದು ತಿಳಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಸಭೆಗೆ ಬಂದ ಅರ್ಜಿಗಳ ವಿವರಗಳನ್ನು ತಿಳಿಸಿದರು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ ಕುಮಾರ್ ಸೇರಿದಂತೆ ಸದಸ್ಯರು ಹಾಜರಿದ್ದರು.