ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಮಹಿಳಾ ಭಜನಾ ಮಂಡಳಿಯ 38 ಮಹಿಳೆಯರು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ಜನವರಿ 13 ರಂದು ನಡೆದ ಪರೀಕ್ಷೆಯಲ್ಲಿ ಕರ್ನಾಟಕ ಪ್ರಸಿದ್ಧ ಹರಿದಾಸರುಗಳು, ವೇದ ಪುರಾಣಗಳ ವಿಷಯಗಳ ಬಗ್ಗೆ ಪರೀಕ್ಷೆ ಬರೆಯಲಾಗಿತ್ತು. ಕುಶಾಲನಗರದ ರಜನಿ ಪ್ರದೀಪ್ ಅವರು ಕುಶಾಲನಗರಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಭಾರತ ಹಾಗೂ ವಿದೇಶಗಳಲ್ಲಿ ಒಟ್ಟು 4 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದು ವಿಶ್ವದ ಎಲ್ಲೆಡೆ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು ಎಂದು ಮಹಿಳಾ ಭಜನಾ ಮಂಡಳಿ ಪ್ರಮುಖರಾದ ರಮಾ ವಿಜಯೇಂದ್ರ ತಿಳಿಸಿದ್ದಾರೆ. ಹರಿದಾಸರ ವೇದ ಪುರಾಣಗಳ ಬಗ್ಗೆ ಅಧ್ಯಯನ ನಡೆಸುವ ಈ ದಾಸ ಪರೀಕ್ಷೆಗೆ ಪದವಿ ಪಡೆಯಲು 5 ವರ್ಷಗಳ ಅವಧಿ ವ್ಯಾಸಂಗ ಮಾಡಬೇಕಾಗುತ್ತದೆ.