ಮಡಿಕೇರಿ, ಫೆ. 17: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ತಾ. 18 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿರುವ ‘ಫ್ಯಾಕಲ್ಟಿ ಡೆವಲಪ್‍ಮೆಂಟ್ ಪ್ರೊಗ್ರಾಂ’ ಎಂಬ ವಿಷಯವನ್ನು ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಶಾಸ್ತ್ರ ವಿಭಾಗದ ಕಟ್ಟಡದಲ್ಲಿ ನಡೆಸಲಾಗುತ್ತದೆ. ಕಾರ್ಯಾಗಾರಕ್ಕೆ ರಾಜ್ಯದ ಪದವಿ ಕಾಲೇಜುಗಳ ಎಲ್ಲಾ ಪ್ರಾಧ್ಯಾಪಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದದ ವತಿಯಿಂದ ಈ ಮೂಲಕ ತಿಳಿಸಲಾಗಿದೆ. ಭಾಗವಹಿಸುವ ಪ್ರಾಧ್ಯಾಪಕರಿಗೆ ಅನ್ಯ ಕಾರ್ಯ ನಿಮಿತ್ತ ರಜೆ ಸೌಲಭ್ಯ ಇರುತ್ತದೆ.