ಕೂಡಿಗೆ, ಫೆ. 17: ಎಸ್.ಟಿ.ಪಿ. ಮತ್ತು ಎಸ್.ಸಿ.ಪಿ. ಶಾಸಕರ ಅನುದಾನದ ರೂ.9 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿಯ ಮುಖ್ಯ ರಸ್ತೆಯ ಕಾಂಕ್ರಿಟ್ ಕಾಮಗಾರಿಗೆ ಭೂಮಿ ಪೂಜೆ ನಡೆಯಿತು. ಭೂಮಿಪೂಜೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ನೆರವೇರಿಸಿದರು.
ಈ ಸಂದರ್ಭ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಚೆಲುವರಾಜ್, ಸದಸ್ಯ ಸಿ.ಎಸ್. ಅರುಣ್‍ಚಂದ್ರ, ತಾ.ಪಂ. ಮಾಜಿ ಅಧ್ಯಕ್ಷೆ ಜಯಮ್ಮ ಸೇರಿದಂತೆ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.