ಮಡಿಕೇರಿ, ಫೆ. 17: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ವತಿಯಿಂದ ಜಂತು ಹುಳು ನಿವಾರಣಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ಅವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ರಾಜಕುಮಾರ್ ಭಾಗವಹಿಸಿ ಜಂತು ಹುಳು ಭಾದೆಯಿಂದ ರಕ್ಷಿಸಿಕೊಳ್ಳುವ ಕುರಿತು ವಿವರಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಕೆ.ಸಿ. ದಯಾನಂದ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ಕಾಲೇಜಿನ ಬೋಧಕರು, ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.