ಶನಿವಾರಸಂತೆ, ಫೆ. 17: ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು, ಮಾದಕ ವಸ್ತುಗಳ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲೂ ಅಸಭ್ಯ ಸಂದೇಶ ಬಳಕೆಯನ್ನು ತಡೆಗಟ್ಟಲು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಾಗೂ ಮಹಿಳಾ ದೌರ್ಜನ್ಯ ತಡೆ ವಿಚಾರದ ಬಗ್ಗೆ ಅರಿವು ಮೂಡಿಸಲಾಯಿತು. ಶನಿವಾರಸಂತೆ ಕಾವೇರಿ ಪ್ರೌಢಶಾಲೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾವೇರಿ ಕಾಲೇಜಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶನಿವಾರಸಂತೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ, ಉಪನ್ಯಾಸ ನೀಡಿದರು.
ಸಭೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಹರೀಶ್, ರಘು, ಬೋಪಣ್ಣ, ಶಶಿ, ಸವಿತ, ಶಿಕ್ಷಕ ಹೆಚ್.ಎಂ. ಹೂವಣ್ಣ, ಇತರ ಶಿಕ್ಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ವಂದಿಸಿದರು.