ಮಡಿಕೇರಿ, ಫೆ. 18: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ತಾ. 23 ರಂದು ಬೆಳಿಗ್ಗೆ 10 ಗಂಟೆಗೆ ರಂಗಭೂಮಿ ಪ್ರತಿಷ್ಠಾನದ ಸಹಯೋಗದಲ್ಲಿ ಹಿರಿಯ ರಂಗ ಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ಅವರಿಂದ ಹರದಾಸ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಪ್ರಯುಕ್ತ ಅಮರ ಕಾವ್ಯ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಖ್ಯ ಅತಿಥಿಯಾಗಿ ಜಾನಪದ ಕಲಾವಿದ ಮಡೆಯಂಡ ವಿಠಲ್ ಬೆಳ್ಯಪ್ಪ ಪಾಲ್ಗೊಳ್ಳಲಿದ್ದು, ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಬಿ. ಮಾದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದ್ದಾರೆ.