ಮಡಿಕೇರಿ, ಫೆ. 18 : ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ರಾಜ್ಯಶಾಸ್ತ್ರದ ಸಮಕಾಲೀನ ಸಮಸ್ಯೆಗಳು ಮತ್ತು ಸವಾಲುಗಳು ಎಂಬ ವಿಷಯದಲ್ಲಿ ಒಂದು ದಿನದ ವಿಚಾರಗೋಷ್ಠಿ ನಡೆಯಲಿದೆ.

ತಾ. 20 ರಂದು ಆಯೋಜಿತ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೆರವೇರಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಪಿ.ಎಲ್.ಧರ್ಮ, ಸಂಪನ್ಮೂಲ ವ್ಯಕ್ತಿಯಾಗಿ ‘ಸ್ಪರ್ಧಾತ್ಮಕ ಯುಗದಲ್ಲಿ ರಾಜ್ಯಶಾಸ್ತ್ರದ ಪ್ರಸ್ತುತತೆ’ ಎಂಬ ವಿಷಯದಲ್ಲಿ ಪುತ್ತೂರು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪೆÇ್ರ.ಜೇವಿಯರ್ ಡಿಸೋಜ, ‘ಸಾರ್ವಜನಿಕ ಆಡಳಿತದಲ್ಲಿ ರಾಜಕೀಯ ಅಸ್ಥಿರತೆ’ ಎಂಬ ವಿಷಯದಲ್ಲಿ ಹುಣಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿವೃತ್ತ ಪ್ರಾಂಶುಪಾಲ ಪೆÇ್ರ.ಎಚ್.ಸಿ. ಲೋಹಿತಾಶ್ವ, ವೀರಾಜಪೇಟೆ ಕಾವೇರಿ ಕಾಲೇಜು ಪೆÇ್ರ.ಎನ್.ಸಿ.ನೀಲಮ್ಮ ಅವರು ವಿಚಾರ ಮಂಡಿಸಲಿದ್ದಾರೆ.

ಕೊಡಗು ಜಿಲ್ಲಾ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಸಂವಿಧಾನ ಪೂರ್ವ ಪೀಠಿಕೆ ಹೇಳುವ ಸ್ಪರ್ಧೆ,ಅಣಕು ರಾಜಕಾರಣಿ, ಕಿರುನಾಟಕ (ಪ್ರಸ್ತುತ ರಾಜಕೀಯ ಕುರಿತು) ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಟಿ.ಕೆ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಡಿಕೇರಿ ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ, ಮುಖ್ಯ ಅತಿಥಿಯಾಗಿ ಉದ್ಯಮಿ ಉಂಬೈ, ಪೆÇ್ರ.ದಿವ್ಯ.ಅರ್. ಪೆÇ್ರ.ವನಿತ್ ಕುಮಾರ್, ಪೆÇ್ರ.ದಿವ್ಯ, ಪೆÇ್ರ.ವೇಣುಗೋಪಾಲ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವಾಪ್ತಿಯ ಎಲ್ಲಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.