ಮಡಿಕೇರಿ, ಫೆ. 18: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ; ತಾ. 20 ರಿಂದ 26ರ ತನಕ ಗ್ರಾಮೀಣ ಅಧ್ಯಯನ ಶಿಬಿರ ಆಯೋಜಿಸಲಾಗಿದೆ. ಕುಶಾಲನಗರ ಬಳಿ ಕೊಪ್ಪ ಸನಿಹದ ರಾಣಿಗೇಟ್ ಸರಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ಈ ವಾರದ ಶಿಬಿರ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡು, ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.