ವೀರಾಜಪೇಟೆ, ಫೆ.18: ವೀರಾಜಪೇಟೆ ತಾಲೂಕು ಜಾನಪದ ಪರಿಷತ್ ವತಿಯಿಂದ ತಾ.28ರಂದು ವೀರಾಜಪೇಟೆ ತಾಲೂಕು ಮಟ್ಟದ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಾನಪದ ಗೀತೆಗಳ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಶಾಲಾ ಕಾಲೇಜು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ವಿಭಾಗದಲ್ಲಿ ಸ್ಫರ್ದೆ ನಡೆಯಲಿದೆ.

ಸ್ಪರ್ಧಾ ಕಾರ್ಯಕ್ರಮವು ವೀರಾಜಪೇಟೆಯ ಪುರಭವನದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಾ.25ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಜಿತಾ ಕಾರ್ಯಪ್ಪ, (9481771851) ಹಾಗೂ ಸಾಂಸ್ಕøತಿಕ ಸಮಿತಿಯ ಬಿ.ಎಸ್. ಚೇತನ್ (9740701410) ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.