*ಗೋಣಿಕೊಪ್ಪಲು, ಫೆ. 18 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಬಾಳೆಲೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್.ಪೃಥ್ಯು ಅವರ ಅನುದಾನ ರೂ 1.50ಲಕ್ಷ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗುವದು. ಅಗತ್ಯವಿದ್ದಲ್ಲಿ ಮತ್ತಷ್ಟು ಅನುದಾನವನ್ನು ಜಿಲ್ಲಾ ಪಂಚಾಯಿತಿ ಸದಸ್ಯರು ನೀಡಲಿದ್ದಾರೆ. ವಿದ್ಯಾಸಂಸ್ಥೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಇರುವದ ರಿಂದ ಇದರ ಪ್ರಗತಿಗೆ ಸರ್ಕಾರದ ಅನುದಾನವನ್ನು ಯಾವುದಾದರೂ ರೀತಿಯಲ್ಲಿ ಒದಗಿಸಲು ಪ್ರಯತ್ನಿಸ ಲಾಗುವದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್. ಪೃಥ್ಯು, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಉಪಾಧ್ಯಕ್ಷ ಕಾಯಮಾಡ ರಾಜ, ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಸಹ ಕಾರ್ಯದರ್ಶಿ ಪೋಡಮಾಡ ಮೋಹನ್, ಕೋಶಾಧಿಕಾರಿ ಅಡ್ಡೇಂಗಡ ದೇವಯ್ಯ, ಸದಸ್ಯ ಮೇಚಂಡ ಪೆಮ್ಮಯ್ಯ, ಆರ್‍ಎಂಸಿ ಅಧ್ಯಕ್ಷ ಆದೇಂಗಡ ವಿನು ಉತ್ತಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಪೋಡಮಾಡ ಸುಕೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರಮಣಮಾಡ ರಂಜನ್ ಚಂಗಪ್ಪ, ಪ್ರಾಂಶುಪಾಲ ಡಾ.ಜೆ.ಸೋಮಣ್ಣ ಹಾಜರಿದ್ದರು.

-ಎನ್.ಎನ್.ದಿನೇಶ್