ಮಡಿಕೇರಿ, ಫೆ. 18: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 23 ಫಲಾನುಭವಿಗಳಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬೆಳಿಯಂಡ್ರ ರತೀಶ್ ಕುಮಾರ್ ಶರಣ್, ಸದಸ್ಯರಾದ ಕೋಡಿರ ಪ್ರಸನ್ನ ತಮ್ಮಯ್ಯ, ಮುಖಂಡರುಗಳಾದ ಭೀಮಯ್ಯ, ಬಿದ್ದಪ್ಪ, ಸೋಮಪ್ಪ ಇತರರು ಹಾಜರಿದ್ದರು.