ಕೂಡಿಗೆ, ಫೆ. 18: ಸೋಮವಾರಪೇಟೆ ಮೀನುಗಾರಿಕ ಇಲಾಖೆಯ ವತಿಯಿಂದ ಕೂಡಿಗೆಯ ಹಾರಂಗಿ ನದಿಗೆ ಕೂಡಿಗೆ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು 25 ಸಾವಿರ ಮೀನು ಮರಿಗಳನ್ನು ನದಿಗೆ ಬಿಟ್ಟರು.
ನಂತರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆದರ್ಶ ಗ್ರಾಮ ಯೋಜನೆಯು ಮೈಸೂರು ಜಿಲ್ಲೆಯಲ್ಲಿಯು ಈಗಾಗಲೇ ಯಶಸ್ವಿಕಂಡಿದ್ದು, ಅದೇ ಮಾದರಿಯಲ್ಲಿ ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವದು ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಇಲಾಖೆಯ ವತಿಯಿಂದ ದೊರಕುವ ಸೌಲಭ್ಯಗಳನ್ನು ಗ್ರಾಮಸ್ಥರು ಮತ್ತು ಸಾರ್ವಜನಿಕರು ಬಳಸಿಕೊಳ್ಳಬೇಕೆಂದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ತಾಲೂಕು ಬಿಜೆಪಿ ಅಧ್ಯಕ್ಷ ಕುಮಾರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲ, ಸದಸ್ಯರಾದ ಕಲ್ಪನಾ, ಕೆ.ಟಿ. ಈರಯ್ಯ, ಕೂಡಿಗೆ ಸಹಕಾರ ಬ್ಯಾಂಕಿನ ನಿರ್ದೇಶಕ ಕೆ.ಕೆ. ಭೋಗಪ್ಪ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಬಿ.ಜೆ.ಪಿ ಎಸ್‍ಟಿ ಮೋರ್ಚಾದ ಅಧ್ಯಕ್ಷ ಪ್ರಭಾಕರ್ ಇತರರಿದ್ದರು.