ಮಡಿಕೇರಿ, ಫೆ. 19: ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯಡಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘÀ ತಾ. 21 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದು, ಕೊಡಗಿನ ನೌಕರರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ತಿಳಿಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲೆಯ ಗ್ರಾ.ಪಂ.ಗಳ ಸುಮಾರು 200 ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.