ಮಡಿಕೇರಿ, ಫೆ. 19: ಕೊಡಗು ಪ್ರೆಸ್ ಕ್ಲಬ್ 20ನೇ ವಾರ್ಷಿಕೋತ್ಸವ ಪ್ರಯುಕ್ತ ತಾ. 23 ರಂದು ಪತ್ರಿಕಾ ಭವನದಲ್ಲಿ ಪ್ರೆಸ್ ಕ್ಲಬ್ ಡೇ ಆಯೋಜಿಸಲಾಗಿದೆ ಎಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್. ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 3 ಗಂಟೆಯಿಂದ ಪತ್ರಕರ್ತರಿಗೆ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಸಂಜೆ 4.30 ರಿಂದ ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
6 ಗಂಟೆಗೆ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ, ‘ಶಕ್ತಿ’ ಸಂಪಾದಕ ಜಿ. ಚಿದ್ವಿಲಾಸ್, ಪ್ರಜಾಸತ್ಯ ಸಂಪಾದಕ ಡಾ. ಬಿ.ಸಿ. ನವೀನ್‍ಕುಮಾರ್, ಕಾವೇರಿ ಟೈಮ್ಸ್ ಸಂಪಾದಕ ಡಾ. ಬಿ.ಸಿ. ನಂಜಪ್ಪ ಪಾಲ್ಗೊಳ್ಳಲಿದ್ದಾರೆ.
ಛಾಯಾಚಿತ್ರ ಸ್ಪರ್ಧೆ ವಿಜೇತರಿಗೆ ಹಾಗೂ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಪತ್ರಕರ್ತರ ಒಳಾಂಗಣ ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ.
ಸನ್ಮಾನ : ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಕ್ಲಬ್ ಸದಸ್ಯರಾಗಿರುವ 14 ಪತ್ರಕರ್ತರನ್ನು ಸನ್ಮಾನಿಸಲಾಗುತ್ತದೆ. ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿದವರ ಜೀವ ರಕ್ಷಿಸಿದ ಕಿಶೋರ್ ರೈ ಕತ್ತಲೆಕಾಡು, ನವೀನ್ ಡಿಸೋಜ, ವಿಜಯ ಹಾನಗಲ್, ಸತೀಶ್ ನಾರಾಯಣ, ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪುತ್ತರಿರ ಪಪ್ಪು ತಿಮ್ಮಯ್ಯ, 22 ಪುಸ್ತಕ ಪ್ರಕಟ ಮಾಡಿರುವ ಬೊಳ್ಳಜೀರ ಬಿ. ಅಯ್ಯಪ್ಪ, ಮೊದಲ ಕನ್ನಡ ಕೃತಿ ಪ್ರಕಟಿಸಿರುವ ವಿಘ್ನೇಶ್ ಎಂ. ಭೂತನಕಾಡು, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಎ. ಮುರಳೀಧರ್, ರಾಜ್ಯ ಸಮಿತಿ ಸದಸ್ಯ ಅಜ್ಜಮಾಡ ರಮೇಶ್ ಕುಟ್ಟಪ್ಪ, ತಾಲೂಕು ಅಧ್ಯಕ್ಷ ಎಚ್.ಆರ್. ಹರೀಶ್‍ಕುಮಾರ್ (ಸೋಮವಾರಪೇಟೆ), ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ (ವೀರಾಜಪೇಟೆ) ಅಖಿಲ ಭಾರತ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಕ್ಕೆ ಭಾಜನರಾಗಿರುವ ಅಲ್ಲಾರಂಡ ವಿಠಲ ನಂಜಪ್ಪ, ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್ ಪದ್ಮನಾಭ ಅವರನ್ನು ಸನ್ಮಾನಿಸಲಾಗುತ್ತದೆ.