ಶ್ರೀಮಂಗಲ: ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಪಟ್ಟಣ ಜಂಕ್ಷನ್ನಲ್ಲಿ ತಾ. 25 ರಂದು ಪೂರ್ವಾಹ್ನ 11 ಗಂಟೆಗೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇತ್ತೀಚೆಗೆ ಪುಲ್ವಾಮಾದಲ್ಲಿ ಭಯೋತ್ಪದಕರ ಧಾಳಿಗೆ ತುತ್ತಾಗಿ ಹುತಾತ್ಮರಾದ ಯೋಧರಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾಜಿ ಸೈನಿಕರು, ಸಾರ್ವಜನಿಕರು, ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.