ಮಡಿಕೇರಿ, ಫೆ. 19 : ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಯುವ ಸಮ್ಮೇಳನ, ಕಾರ್ಯಾಗಾರ, ತರಬೇತಿ, ಜಿಲ್ಲಾ ಯುವ ಪ್ರಶಸ್ತಿ ಪ್ರದಾನ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣಾ ಸಮಾರಂಭ ತಾ. 22 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಅಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ, ಸಂಸದ ಪ್ರತಾಪ ಸಿಂಹ ಯುವ ಸಂಘÀ ಪ್ರಶಸ್ತಿ ಪ್ರದಾನ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಿ.ಎ. ಹರೀಶ್ ವೈಯಕ್ತಿಕ ಪ್ರಶಸ್ತಿ ವಿತರಣೆ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪಾಲ್ಗೊಳ್ಳಲಿದ್ದಾರೆ.
ಅಂತರÀರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ಯುವ ಸಮೂಹಕ್ಕೆ ಹಿತವಚನ ನೀಡಲಿದ್ದಾರೆ. ಮಡಿಕೆÉೀರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ.ಕೆ.ಸಿ.ದಯಾನಂದ “ಪ್ರಸ್ತುತ ಸಮಾಜದಲ್ಲಿ ಯುವಜನತೆ” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಸುಕುಮಾರ್ ಮಾಹಿತಿ ನೀಡಿದರು.
ಯಾರಿಗೆ ಪ್ರಶಸ್ತಿ :
ಜಿಲ್ಲೆಯ ಯುವಕ ಯುವತಿಯರಿಗೆ ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಎಂಬ ವಿಷಯದಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ನಡೆಸಿದ್ದು, ಇದರಲ್ಲಿ ವೀರಾಜಪೇಟೆಯ ಹೆಚ್.ಎಂ.ದರ್ಶನ್ ಪ್ರಥಮ, ಪ್ಲಾವಿಯಾ ಅನುಷಾ ಮಾರ್ಟಿಸ್ ದ್ವಿತೀಯ ಹಾಗೂ ವೀರಾಜಪೇಟೆಯ ಎಂ.ಕೆ.ಹರ್ಷಿತ್ ತೃತೀಯ ಸ್ಥಾನ ಗಳಿಸಿದ್ದಾರೆ. ಇದರೊಂದಿಗೆ ಜಿಲ್ಲೆಯ ಆಯ್ದ 25 ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಎಂದು ಸುಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಕೆ.ಕೆ.ಗಣೇಶ್, ಖಜಾಂಚಿ ಕೆ.ಎಂ. ಮೋಹನ್, ಮಡಿಕೇರಿ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ನವೀನ್ ದೇರಳ ಹಾಗೂ ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ಚಂದ್ರಿಕಾ ಉಪಸ್ಥಿತರಿದ್ದರು.
ಅತ್ಯುತ್ತಮ ಯುವ ಸಂಘ ಪ್ರಶಸ್ತಿ
ನೆಹರು ಯುವ ಕೇಂದ್ರ ನೀಡುವ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಯುವ ಸಂಘ ಪ್ರಶಸ್ತಿಯನ್ನು ನೆಲ್ಲಿಹುದಿಕೇರಿಯ ಡೋಮಿನೋಸ್ ಕಲಾ ಮತ್ತು ಕ್ರೀಡಾ ಯುವಕ ಸಂಘ ಪಡೆದುಕೊಂಡಿದ್ದು, ಪ್ರಶಸ್ತಿಯು 25ಸಾವಿರ ರೂ. ನಗದು ಒಳಗೊಂಡಿದೆ. ಸಾಮಾಜಿಕ ಕ್ಷೇತ್ರ, ಸಮುದಾಯದ ಅಭಿವೃದ್ಧಿ, ಕ್ರೀಡೆ, ಸಾಂಸ್ಕøತಿಕ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ತೊಡಗಿಸಿಕೊಂಡ ಸಂಘಕ್ಕೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.