ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನ್ಯಾಯಾಂಗ ಇಲಾಖಾ ನೌಕರರ ಸಂಘ ಮತ್ತು ಸರ್ಕಾರಿ ಅಭಿಯೋಜನಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ.8 ರಂದು (ಇಂದು) ಬೆಳಿಗ್ಗೆ 10.15 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವಿ.ವಿ. ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ವಿಜಯಕುಮಾರ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಬಿ.ಕೆ.ಮನು, ಸರ್ಕಾರಿ ಅಭಿಯೋಜಕ ಕೃಷ್ಣವೇಣಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್ ಇತರರು ಪಾಲ್ಗೊಳ್ಳಲಿದ್ದಾರೆ.
ಜನಜಾಗೃತಿ ಕಾರ್ಯಕ್ರಮ
ಕೇಂದ್ರೀಯ ಅಂತರ್ಜಲ ಮಂಡಳಿ ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಃಶ್ಚೇತನ ಮಂತ್ರಾಲಯ ಬೆಂಗಳೂರು ಇವರ ವತಿಯಿಂದ ಜಲ ಸಂರಕ್ಷಣೆಗಾಗಿ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮವು ಇಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ, ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಕೇಂದ್ರೀಯ ಅಂತರ್ಜಲ ಮಂಡಳಿ ಜಲಸಂಪನ್ಮೂಲ ವಿಭಾಗದ ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಮಂತ್ರಾಲಯ ಪ್ರಾದೇಶಿಕ ನಿರ್ದೇಶಕರಾದ ಡಾ.ಎ.ಸುಬ್ಬುರಾಜ್, ಅಂತರ್ಜಲ ನಿರ್ದೇಶನಾಲಯ ಹಿರಿಯ ಭೂವಿಜ್ಞಾನಿ ಕೆ.ಜಿ.ಸೌಮ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ಪ್ರಮಾಣ ಪತ್ರ ವಿತರಣೆ
ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಹಾಗೂ ಅಕ್ಕಸಾಲಿಗ ಕಾರ್ಮಿಕರ ಒಕ್ಕೂಟ ಇವರ ಸಹಭಾಗಿತ್ವದಲ್ಲಿ ಪ್ರಮಾಣ ಪತ್ರ ವಿತರಣಾ ಸಮಾರಂಭವು ಬೆಳಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕಾರ್ಮಿಕ ಇಲಾಖಾಧಿಕಾರಿ ಮುಡಿಯಪ್ಪ ಯತ್ನಟ್ಟಿ, ಕೊಡಗು ಜಿಲ್ಲಾ ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷರಾದ ಕೆ.ಕೆ.ಶ್ರೀನಿವಾಸ್, ಮಡಿಕೇರಿ ಅಕ್ಕಸಾಲಿಗ ಕಾರ್ಮಿಕ ಒಕ್ಕೂಟದ ಅಧ್ಯಕ್ಷರಾದ ಕೆ.ರವಿ.ಆಚಾರ್ಯ, ಕರ್ನಾಟಕ ಸ್ಮಿತ್ ಅಕಾಡೆಮಿಯ ಸಿಇಒ ವಿವೇಕ್ ಆಚಾರ್ಯ ಇತರರು ಪಾಲ್ಗೊಳ್ಳಲಿದ್ದಾರೆ.