ಮಡಿಕೇರಿ, ಮಾ. 7: ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಹಾಗೂ ಅಕ್ಕಸಾಲಿಗ ಕಾರ್ಮಿಕರ ಒಕ್ಕೂಟ ಇವರ ಸಹಭಾಗಿತ್ವದಲ್ಲಿ ಪ್ರಮಾಣ ಪತ್ರ ವಿತರಣಾ ಸಮಾರಂಭ ತಾ. 8 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕಾರ್ಮಿಕ ಇಲಾಖಾಧಿಕಾರಿ ಮುಡಿಯಪ್ಪ ಯತ್ನಟ್ಟಿ, ಕೊಡಗು ಜಿಲ್ಲಾ ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್, ಮಡಿಕೇರಿ ಅಕ್ಕಸಾಲಿಗ ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಕೆ. ರವಿ ಆಚಾರ್ಯ, ಕರ್ನಾಟಕ ಸ್ಮಿತ್ ಅಕಾಡೆಮಿಯ ಸಿಇಒ ವಿವೇಕ್ ಆಚಾರ್ಯ ಇತರರು ಪಾಲ್ಗೊಳ್ಳಲಿದ್ದಾರೆ.