ಮಡಿಕೇರಿ, ಮಾ.7 : ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ ನಗರ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಮಿಕ ಸಮ್ಮಾನ ದಿನಾಚರಣೆಯಲ್ಲಿ ವಿವಿಧ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಸೇವಾ ಅವಧಿ ಮತ್ತು ನೈಪುಣ್ಯತೆಯ ಆಧಾರದಲ್ಲಿ ಜಿಲ್ಲೆಯ 9 ಮಂದಿ ಕಾರ್ಮಿಕರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.