ಮಡಿಕೇರಿ, ಮಾ. 8: ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಹೆರವನಾಡು ಗ್ರಾಮದಲ್ಲಿ ಗ್ರಾಮ ವಿಕಾಸ್ ಯೋಜನೆಯಡಿ ರೂ. 1 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಅವರು ಚಾಲನೆ ನೀಡಿದರು. ಅಲ್ಲದೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಿಎಂಜಿಎಸ್‍ವೈ ಹಾಗೂ ಎನ್‍ಡಿಆರ್‍ಎಫ್ ಯೋಜನೆಯಡಿ ರೂ. 2 ಕೋಟಿ ಮೊತ್ತದ ಕಾಮಗಾರಿಗಳಿಗೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ತಾ.ಪಂ. ಸದಸ್ಯ ಕೊಡಪಾಲು ಗಣಪತಿ, ಸದಸ್ಯೆ ತುಂತಜೆ ಕುಮುದ ರಶ್ಮಿ, ಎಪಿಎಂಸಿ ಸದಸ್ಯ ಬೆಪ್ಪುರನ ಮೇದಪ್ಪ, ಗ್ರಾ.ಪಂ. ಉಪಾಧ್ಯಕ್ಷೆ ಶಾಂತಿ, ಸದಸ್ಯರುಗಳು, ಹೆರವನಾಡು ಗ್ರಾಮಸ್ಥರು ಹಾಜರಿದ್ದರು.