ಶ್ರೀಮಂಗಲ, ಮಾ. 28: ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಹೈಸೂಡ್ಲೂರು ಗ್ರಾಮದಲ್ಲಿ 50ಕ್ಕೂ ಅಧಿಕ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನೆಲೆ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕÀ್ಕರಿಸುವದಾಗಿ ಎಚ್ಚರಿಸಿದ್ದಾರೆ.
ವೀರಾಜಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಂದ ಮತ್ತು ಹುದಿಕೇರಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮೂಲಭೂತ ಸೌಕರ್ಯ ಕಲ್ಪಿಸಿಕೊಳ್ಳುತ್ತಿರುವದರಲ್ಲಿ ನಿರ್ಲಕ್ಷ ತೋರಿಸುತ್ತಿದ್ದಾರೆ.
ಇಲ್ಲಿನ 50ಕ್ಕೂ ಅಧಿಕ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ವಿದ್ಯುತ್ ಸಂಪರ್ಕ, ರಸ್ತೆ ಹಾಗೂ ಆರೋಗ್ಯ ಸೇವೆ ಸೇರಿದಂತೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸೂಕ್ತ ಸೌಲಭ್ಯ ದೊರಕಿಸಿಕೊಡುವಲ್ಲಿ ನಿರ್ಲಕ್ಷ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂದರ್ಭ ಡಿ.ಎಸ್.ಎಸ್. ಸಂಘಟನೆಯ ಜಿಲ್ಲಾ ಸಂಚಾಲಕ ಪರಶುರಾಮ್ ಮಾತನಾಡಿ, ನಿವೇಶನ ರಹಿತ ರೈತರಿಗೆ ನಿವೇಶನ ಒದಗಿಸಿ ಕೊಡಬೇಕೆಂದು ತಾ.ಪಂ. ಸಭೆಯಲ್ಲಿ 2013 ರಲ್ಲಿಯೇ ನಿರ್ಣಯ ದಾಖಲಿಸಿದ್ದರೂ ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದರು.
ಕೃಷ್ಣಪ್ಪ ಮಾತನಾಡಿ, ಇಲ್ಲಿನ ಹೆಣ್ಣು ಮಕ್ಕಳು, ಸಣ್ಣ ಮಕ್ಕಳು, ಮೂಲಭೂತ ಸೌಕರ್ಯವಿಲ್ಲದೆ ಶೌಚಾಲಯಕ್ಕೆ ತೆರಳಲು ತುಂಬಾ ಸಮಸ್ಯೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.