ಗುಡ್ಡೆಹೊಸೂರು, ಮಾ. 29: ಇಲ್ಲಿಗೆ ಸಮೀಪದ ತ್ಯಾಗತ್ತೂರು ಗ್ರಾಮದ ಶ್ರೀ ಭಗವತಿ ದೇವಸ್ಥಾನದ ವಾರ್ಷಿಕ ಉತ್ಸವವು ವಿಜೃಂಭಣೆಯಿಂದ ನಡೆಯಿತು. ಗ್ರಾಮ ದೇವತೆಯಾದ ಶ್ರೀ ಭಗವತಿ ದೇವಿಗೆ ವಿವಿಧ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮದ ಸಾವಿರಾರು ಮಂದಿ ಭಾಗವಹಿಸಿದ್ದರು.
ಈ ಮೂರು ದಿನಗಳಲ್ಲಿಯೂ ಅನ್ನಸಂತರ್ಪಣೆ ನಡೆಸಲಾಯಿತು. ಪೂಜಾ ಕಾರ್ಯಕ್ರಮದಲ್ಲಿ ತಕ್ಕಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಉತ್ಸವ ಸಮಿತಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು.