ವೀರಾಜಪೇಟೆ, ಮಾ. 29: ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಏಪ್ರಿಲ್ 1 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಗೋಣಿಕೊಪ್ಪಲಿನ ಲಯನ್ಸ್ ಸಂಸ್ಥೆಯ ಸಂಯೋಜನೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗುತ್ತಿದೆ.

ರಕ್ತದಾನ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷ ಪುತ್ತಮನೆ ಸ್ಮರಣ್ ಉದ್ಘಾಟಿಸಲಿದ್ದಾರೆ. ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಪಿ. ಕರುಂಬಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ ವಹಿಸಲಿದ್ದಾರೆ.