ಶನಿವಾರಸಂತೆ, ಏ. 12: ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದಡಿ ಮತದಾರರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮ ಹಾಗೂ ಬೀದಿ ನಾಟಕ ಪ್ರದರ್ಶನವನ್ನು ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಏರ್ಪಡಿಸಲಾಗಿತ್ತು.

ಮತದಾರರ ಜಾಗೃತಿ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರೇಗೌಡ ತಮಟೆ ಬಾರಿಸುವ ಮೂಲ ಚಾಲನೆ ನೀಡಿದರು. ಕಲಾವಿದ ಇ. ರಾಜು ನೇತೃತ್ವದಲ್ಲಿ ಮತದಾನದ ಮಹತ್ವ ಕುರಿತು ಬೀದಿ ನಾಟಕ ಪ್ರದರ್ಶಿಸಲಾಯಿತು.