ವೀರಾಜಪೇಟೆ, ಏ. 12: ಬಾಬು ಜಗಜೀವನ್‍ರಾಂ ಅವರು ಪ್ರತಿಯೊಬ್ಬರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಂತಹ ಪ್ರತಿಷ್ಠಿತ ವ್ಯಕ್ತಿ ಎಂದು ಭೂ ದಾಖಲೆಗಳ ಉಪನಿರ್ದೇಶಕ ಪಿ. ಶ್ರೀನಿವಾಸ್ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವೀರಾಜಪೇಟೆ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಂ ಅವರ 112ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಪ್ರೀತಿ ಚಿಕ್ಕಮಾದಯ್ಯ ಮಾತನಾಡಿದರು. ಈ ಸಂದರ್ಭ ಕಂದಾಯ ಇಲಾಖೆ, ತಾಲೂಕು ಕಚೇರಿ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು. ಹೆಚ್.ಜಿ. ಮಂಜುನಾಥ್ ಸ್ವಾಗತಿಸಿ, ವಂದಿಸಿದರು.