ಮಡಿಕೇರಿ, ಏ. 13: ಜಿಲ್ಲಾ ಬಾಲಭವನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗಾಗಿ ನಗರದ ಸ್ತ್ರೀಶಕ್ತಿ ಭವನ ಎಫ್.ಎಂ.ಸಿ. ಕಾಲೇಜು ಹತ್ತಿರ ತಾ. 22 ರಿಂದ ಮೇ 6 ರವರೆಗೆ ಬೇಸಿಗೆ ಶಿಬಿರ ಕಾರ್ಯಕ್ರಮ ನಡೆಯಲಿದೆ. ಶಿಬಿರಕ್ಕೆ ಕೇವಲ 75 ಮಕ್ಕಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆಧ್ಯತೆ ನೀಡಲಾಗುವದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.