ಮಡಿಕೇರಿ, ಏ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಹಂತೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೊ ಇತರರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಅಂಬೇಡ್ಕರ್ ಅವರು ಸ್ತ್ರೀಯರಿಗೆ ಮತದಾನ ಹಕ್ಕು ಮತ್ತು ಸಮಾನ ಅವಕಾಶ, ಕಾರ್ಮಿಕರಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳು, ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ,
(ಮೊದಲ ಪುಟದಿಂದ) 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ, ಚುನಾವಣಾ ಆಯೋಗ ಸ್ಥಾಪನೆ, ಹೀಗೆ ಹತ್ತು ಹಲವು ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಸಮಾನತೆಯ ಸಮಾಜ ಹಾಗೂ ಆಧುನಿಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಗಣ್ಯರು ಸ್ಮರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಚಿಕ್ಕಬಸವಯ್ಯ, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.