ಸೋಮವಾರಪೇಟೆ, ಏ. 14: ವಿಶ್ವ ಆರೋಗ್ಯ ದಿನದ ಅಂಗವಾಗಿ ರಾಷ್ಟ್ರೀಯ ಜೇಸೀ ಸಂಸ್ಥೆಯ ಮಿಷನ್ ಡಯಾಬಿಟಿಸ್ ಫ್ರೀ ಇಂಡಿಯ ಕಾರ್ಯಕ್ರಮದಡಿ ಸ್ಥಳೀಯ ಜೇಸಿ ಸಂಸ್ಥೆ, ಸರ್ಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಿತು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಶಿಬಿರಕ್ಕೆ ಸರ್ಕಾರಿ ಆಸ್ಪತ್ರೆಯ ವೈದ್ಯ ಶಿವಪ್ರಸಾದ್ ಚಾಲನೆ ನೀಡಿ ಮಾತನಾಡಿದರು. ಜೇಸಿ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಪುರುಷೋತ್ತಮ್ ಮಾತನಾಡಿ, ಮಧುಮೇಹ ಕಾಯಿಲೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಜೇಸಿರೇಟ್ಸ್ ಅಧ್ಯಕ್ಷೆ ಸುಮಲತ ಪುರುಷೋತ್ತಮ್, ಕಾರ್ಯದರ್ಶಿ ಉಷಾರಾಣಿ ಗುರುಪ್ರಸಾದ್, ವಲಯ ಅಧಿಕಾರಿ ಮಾಯಾ ಗಿರೀಶ್, ಪೂರ್ವಾಧ್ಯಕ್ಷ ಕೆ.ಎ. ಪ್ರಕಾಶ್ ಉಪಸ್ಥಿತರಿದ್ದರು.